⚡ಟ್ರೆಂಡಿಂಗ್

ಹುಬ್ಬಳ್ಳಿ BRTS ಕಾರಿಡಾರ್ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಒತ್ತಾಯಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳುವವರೆಗೆ ಅವಕಾಶ ನೀಡುವಂತೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಆಗ್ರಹ

ಹುಬ್ಬಳ್ಳಿ: ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿಯಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬಿಆರ್‌ಟಿಎಸ್ ಕಾರಿಡಾರ್ ರಸ್ತೆಯನ್ನು ತಾತ್ಕಾಲಿಕವಾಗಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸಾರಿಗೆ ಇಲಾಖೆಗೆ ಒತ್ತಾಯಿಸಿದೆ.

ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ವ್ಯಾಪಾರಸ್ಥರು ಹಾಗೂ ಉದ್ಯಮಿಗಳು ಈ ಕುರಿತು ಗಂಭೀರ ಚರ್ಚೆ ನಡೆಸಿದರು. ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿಯಿಂದ ಹುಬ್ಬಳ್ಳಿ–ಧಾರವಾಡ ರಸ್ತೆಯಲ್ಲಿ ವಾಹನ ಸಂಚಾರದ ಒತ್ತಡ ಹೆಚ್ಚಾಗಿದ್ದು, ಸಾರ್ವಜನಿಕರು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಸಂಚಾರ ದಟ್ಟಣೆ ನಿವಾರಣೆಗೆ ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬಿಆರ್‌ಟಿಎಸ್ ಕಾರಿಡಾರ್ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಂಸ್ಥೆ ಆಗ್ರಹಿಸಿದೆ.

ಅದೇ ರೀತಿ, ಫ್ಲೈಓವರ್ ಕಾಮಗಾರಿಯನ್ನು ವೇಗಗೊಳಿಸಿ ಆದಷ್ಟು ಬೇಗ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರು, ವ್ಯಾಪಾರಸ್ಥರು ಹಾಗೂ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸಾರಿಗೆ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದೆ.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...