ಹುಬ್ಬಳ್ಳಿ: ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸ ಮತ್ತೆ ಮಿತಿ ಮೀರಿದ್ದು, ಬೇಕರಿ ಮಾಲೀಕನ ಮೇಲೆ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಹಲ್ಲೆಯ ಸಂಪೂರ್ಣ ದೃಶ್ಯ ಬೇಕರಿಯಲ್ಲಿದ್ದ CCTV ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಬೇಕರಿಗೆ ನುಗ್ಗಿದ ಪುಡಿರೌಡಿಗಳ ಗುಂಪು ಕ್ಷುಲ್ಲಕ ಕಾರಣಕ್ಕೆ ಮಾಲೀಕನೊಂದಿಗೆ ವಾಗ್ವಾದ ನಡೆಸಿ, ಬಳಿಕ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆರೋಪಿಗಳು ಮಾಲೀಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ದೃಶ್ಯ CCTVಯಲ್ಲಿ ದಾಖಲಾಗಿದೆ.
ಘಟನೆಯಿಂದ ಸ್ಥಳೀಯ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದು, ನಗರದಲ್ಲಿ ಹೆಚ್ಚುತ್ತಿರುವ ಗೂಂಡಾಗಿರಿಗೆ ಕಡಿವಾಣ ಹಾಕುವಂತೆ ಪೊಲೀರಿಗೆ ಒತ್ತಾಯಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಮಾಹಿತಿ ಪಡೆದು ತನಿಖೆ ಆರಂಭಿಸಿದ್ದು, CCTV ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳು ಸಾರ್ವಜನಿಕರ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ.
Post a Comment