⚡ಟ್ರೆಂಡಿಂಗ್

ಹುಬ್ಬಳ್ಳಿ: ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..!NWKRTC ಚೀಫ್ ಮೆಕ್ಯಾನಿಕಲ್ ಮನೆ-ಕಚೇರಿ ಮೇಲೆ ಏಕಕಾಲಕ್ಕೆ ದಾಳಿ

ನ್ಯೂ ವಿಜಯ ನ್ಯೂಸ್ ವರದಿ

ಹುಬ್ಬಳ್ಳಿ: ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..!
NWKRTC ಚೀಫ್ ಮೆಕ್ಯಾನಿಕಲ್ ಮನೆ-ಕಚೇರಿ ಮೇಲೆ ಏಕಕಾಲಕ್ಕೆ ದಾಳಿ

ಹುಬ್ಬಳ್ಳಿ: ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದ್ದು, ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆಯೇ ನಡೆದ ದಿಢೀರ್ ದಾಳಿ ಅಧಿಕಾರಿಗಳ ವಲಯದಲ್ಲಿ ಸಂಚಲನ ಮೂಡಿಸಿದೆ.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಹುಬ್ಬಳ್ಳಿ ವಿಭಾಗದಲ್ಲಿ ಚೀಫ್ ಮೆಕ್ಯಾನಿಕಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಿದ್ದೇಶ್ವರ ಹೆಬ್ಬಾಳ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಾಗೂ ಸಾರ್ವಜನಿಕ ಹಣ ದುರುಪಯೋಗದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿರುವ ಕಚೇರಿ ಮತ್ತು ನಿವಾಸದ ಜೊತೆಗೆ ಡಾವಣಗೇರಿಯ ಮನೆಯನ್ನು ಗುರಿಯಾಗಿಸಿಕೊಂಡು ಲೋಕಾಯುಕ್ತ ತಂಡಗಳು ಪರಿಶೀಲನೆ ನಡೆಸಿವೆ. ಡಾವಣಗೇರಿ ಲೋಕಾಯುಕ್ತ ಎಸ್‌ಪಿ ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ ಸುಮಾರು 12 ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಆಸ್ತಿ ದಾಖಲೆಗಳು ಹಾಗೂ ಮಹತ್ವದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎನ್ನಲಾಗಿದೆ.

ದಾಳಿ ವೇಳೆ ಅಧಿಕಾರಿಗಳು ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದು, ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಬಿಗಿ ಕ್ರಮ ಮುಂದುವರಿದಿದೆ.

ನ್ಯೂ ವಿಜಯ ನ್ಯೂಸ್
ಸತ್ಯದ ಪರ | ಜನರ ಧ್ವನಿ | ನಿಮ್ಮ ನ್ಯೂಸ್ ನಿಮ್ಮೊಂದಿಗೆ

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...