ಧಾರವಾಡ, ಜು.13: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ವಿತರಿಸಲಾದ ಗಣತಿ ನಮೂನೆಗಳನ್ನು ಅರ್ಹ ಮತದಾರರು ನಿಗದಿತ ಅವಧಿಯೊಳಗೆ ಭರ್ತಿ ಮಾಡಿ ಸಂಬಂಧಿತ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (BLO) ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಅವರ ಮಾಹಿತಿ ಪ್ರಕಾರ, ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ 1,665 ಮತಗಟ್ಟೆಗಳು ಕಾರ್ಯನಿರ್ವಹಿಸುತ್ತಿದ್ದು, ಅಷ್ಟೇ ಸಂಖ್ಯೆಯ ಬಿಎಲ್‌ಒಗಳು ಹಾಗೂ 230 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 16,21,961 ಮತದಾರರಿದ್ದು, ಇದುವರೆಗೆ 15,19,544 ಗಣತಿ ನಮೂನೆಗಳನ್ನು (93.69%) ವಿತರಿಸಲಾಗಿದೆ. ಅವುಗಳಲ್ಲಿ 3,33,765 ನಮೂನೆಗಳು (20.58%) ಮಾತ್ರ ಗಣಕೀಕರಣಗೊಂಡಿದ್ದು, ಉಳಿದ ನಮೂನೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಿ ಸಲ್ಲಿಸುವಂತೆ ಅವರು ಮನವಿ ಮಾಡಿದರು.
ಭರ್ತಿ ಮಾಡಿದ ನಮೂನೆಗಳನ್ನು ಬಿಎಲ್‌ಒಗಳಿಗೆ ಹಿಂದಿರುಗಿಸದಿದ್ದರೆ, ಸಂಬಂಧಿತ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ಪ್ರತಿಯೊಬ್ಬ ಮತದಾರರೂ ತಮ್ಮ ಮಾಹಿತಿಯನ್ನು ಪರಿಶೀಲಿಸಿ, ನಮೂನೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಗೈರುಹಾಜರಿರುವ, ಶಾಶ್ವತವಾಗಿ ಸ್ಥಳಾಂತರಗೊಂಡ, ಮರಣ ಹೊಂದಿರುವ ಹಾಗೂ ದ್ವಿಪ್ರತಿ ಮತದಾರರನ್ನು ಗುರುತಿಸುವ ಕಾರ್ಯವೂ ನಡೆಯುತ್ತಿದ್ದು, ಒಟ್ಟು 57,319 ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 27,594 ಶಾಶ್ವತ ವಲಸೆ, 7,242 ಮರಣ, 1,803 ದ್ವಿಪ್ರತಿ, 20,449 ಗೈರುಹಾಜರಿ ಹಾಗೂ 231 ಇತರೆ ಪ್ರಕರಣಗಳು ಸೇರಿವೆ.
ಮತದಾರರಿಗೆ ಅನುಕೂಲವಾಗುವಂತೆ ಜಿಲ್ಲೆಯಾದ್ಯಂತ 452 ಮತದಾರರ ಸೌಲಭ್ಯ ಕೇಂದ್ರಗಳು (VFC) ಹಾಗೂ 509 ಬಿಎಲ್‌ಒ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತಿ, ನಾಡ ಕಚೇರಿ, ಗ್ರಾಮ ಒನ್, ವಾರ್ಡ್ ಕಚೇರಿ, ತಹಶೀಲ್ದಾರ್ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.
ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಬೂತ್ ಮಟ್ಟದ ಏಜೆಂಟರನ್ನು (BLA) ನೇಮಕ ಮಾಡಿ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಪ್ರಸ್ತುತ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮಾತ್ರ ಬಿಎಲ್‌ಎಗಳನ್ನು ನೇಮಕ ಮಾಡಿದ್ದು, ಉಳಿದ ಪಕ್ಷಗಳು ಕೂಡ ಶೀಘ್ರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯ ಬಳಿಕ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ಬಿಎಲ್‌ಒಗಳು ಮನೆ ಮನೆಗೆ ತೆರಳಿ ಅರ್ಹ ಮತದಾರರಿಂದಲೇ ನಮೂನೆಗಳನ್ನು ಭರ್ತಿ ಮಾಡಿಸಬೇಕು. ಒಂದೇ ಮನೆಗೆ ಎಲ್ಲ ಅರ್ಜಿಗಳನ್ನು ನೀಡಿ ವಿತರಿಸುವ ಕ್ರಮ ಅನುಸರಿಸಬಾರದು
إرسال تعليق