ಹುಬ್ಬಳ್ಳಿ, ಜು. 30: ಮಾನ್ಯ ಶ್ರೀ B.K. ಸಿಂಗ್, IPS (ADGP, CID) ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಕಚೇರಿಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಕಮಿಷನರೇಟ್‌ನ ವಿವಿಧ ವಿಭಾಗಗಳ ಕಾರ್ಯವೈಖರಿ, ಆಡಳಿತಾತ್ಮಕ ವ್ಯವಸ್ಥೆ, ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು. ಇಲಾಖೆಯ ಕಾರ್ಯಕ್ಷಮತೆಯನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ಭೇಟಿಯ ವೇಳೆ ಮಾನ್ಯ ಪೊಲೀಸ್ ಆಯುಕ್ತರು, DCP (ಸಂಚಾರ ಮತ್ತು ಅಪರಾಧ) ರವೀಂದ್ರ ಕಾಶೆಣ್ಣನವರ್ ಹಾಗೂ ಕಮಿಷನರೇಟ್‌ನ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದು, ಇಲಾಖೆಯ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
Post a Comment