⚡ಟ್ರೆಂಡಿಂಗ್

🚨 BIG BREAKING | ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ

ನವದೆಹಲಿ, ಜುಲೈ 25: NEET-UG ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ತಕ್ಷಣದಿಂದಲೇ ಅಂಗೀಕರಿಸಿದ್ದಾರೆ.

ಇದರೊಂದಿಗೆ, ಧಾರವಾಡ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಅವರು ತಮ್ಮ ಹಾಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಜೊತೆಗೆ ಶಿಕ್ಷಣ ಸಚಿವಾಲಯದ ಕಾರ್ಯಭಾರವನ್ನೂ ನಿರ್ವಹಿಸಲಿದ್ದಾರೆ.

NEET-UG ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿತ್ತು. ಸರ್ಕಾರ ರಾಜೀನಾಮೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳ ಕುರಿತು ಕ್ರಮ ಕೈಗೊಂಡ ನಂತರ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...