ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಅಭ್ಯರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿ, ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಮಹಾಪೌರ ಹಾಗೂ ಉಪಮಹಾಪೌರ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿಂದ ಆಯ್ಕೆಯಾಗಲಿ ಎಂದು ಹಾರೈಸಿದ ಮುಖಂಡರು, ಹುಬ್ಬಳ್ಳಿ–ಧಾರವಾಡ ನಗರದ ಸಮಗ್ರ ಅಭಿವೃದ್ಧಿ, ಜನಪರ ಆಡಳಿತ, ಮೂಲಸೌಕರ್ಯ ವೃದ್ಧಿ ಹಾಗೂ ನಾಗರಿಕರ ಆಶೋತ್ತರಗಳಿಗೆ ಸ್ಪಂದಿಸುವ ಉತ್ತಮ ಆಡಳಿತ ನೀಡುವಲ್ಲಿ ಅವರು ಯಶಸ್ವಿಯಾಗಲಿ ಎಂದು ಶುಭ ಕೋರಿದರು.
ನಗರದ ಅಭಿವೃದ್ಧಿಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಜನರ ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ಉಭಯ ಅಭ್ಯರ್ಥಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದರು.
Post a Comment