⚡ಟ್ರೆಂಡಿಂಗ್

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ ಆಜೀವಿಕ ಮಿಷನ್‌ಗೆ ಚಾಲನೆ: ಸಿಇಒ ಭುವನೇಶ ಪಾಟೀಲ ಉದ್ಘಾಟನೆ

ಧಾರವಾಡ, ಜು.3: ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ 'ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ ಆಜೀವಿಕ ಮಿಷನ್' (VBGRM) ಯೋಜನೆಯ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭುವನೇಶ ಪಾಟೀಲ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಅವರು, ಗ್ರಾಮೀಣ ಜೀವನೋಪಾಯ, ಉದ್ಯೋಗಾವಕಾಶಗಳ ವಿಸ್ತರಣೆ ಹಾಗೂ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳ, ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ ಉಪಸ್ಥಿತರಿದ್ದರು.

ವಿಷಯ ಸಮಾಲೋಚಕರಾದ ಪ್ರಶಾಂತ್ ತುರ್ಕಾಣಿ, ಸದಾನಂದ ಅಮರಾಪುರ ಹಾಗೂ ಚಂದ್ರು ಪೂಜಾರ ಯೋಜನೆಯ ಉದ್ದೇಶ, ಅನುಷ್ಠಾನದ ವಿಧಾನ ಹಾಗೂ ವಿವಿಧ ಅಂಶಗಳ ಕುರಿತು ಮಾಹಿತಿ ನೀಡಿದರು.

ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಎಲ್ಲಾ ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO), ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಹಾಗೂ ಎಂಐಎಸ್–ಐಇಸಿ ಸಂಯೋಜಕರು ಭಾಗವಹಿಸಿ ಯೋಜನೆಯ ಕುರಿತು ತರಬೇತಿ ಪಡೆದರು.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...