⚡ಟ್ರೆಂಡಿಂಗ್

ಧಾರವಾಡದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಧಾರವಾಡ, ಜುಲೈ 23: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಪ್ರತಿಭಟನೆಯ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಗೂಂಡಾ ವರ್ತನೆ ನಡೆಸಿದೆ ಎಂದು ಆರೋಪಿಸಿ, ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಧಾರವಾಡದ ಸುಭಾಸ್ ರಸ್ತೆಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಪಕ್ಷದ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಮುಖಂಡರು, ಪ್ರಮುಖರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ದೇಶದ ಪ್ರಧಾನಮಂತ್ರಿಯವರ ನಿವಾಸದ ಮುಂದೆ ನಡೆದ ಘಟನೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಕಾಂಗ್ರೆಸ್ ಪಕ್ಷದ ನಡೆ ಖಂಡನೀಯವಾಗಿದೆ ಎಂದು ಆರೋಪಿಸಿದರು. ಇಂತಹ ಗೂಂಡಾ ಸಂಸ್ಕೃತಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವಂತೆ ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಹಾಗೂ ಮಹಾನಗರ ಘಟಕದ ಪ್ರಮುಖ ನಾಯಕರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮತ್ತು ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...