ನವದೆಹಲಿ: ದೇಶಾದ್ಯಂತ NEET-UG ಪರೀಕ್ಷೆಯ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆಯಲ್ಲಿ ನಡೆದ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗಳ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು ಎಂಬ ಉದ್ದೇಶದಿಂದ ತಾವು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಕಳೆದ ಕೆಲವು ವಾರಗಳಿಂದ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ಯುವಜನ ಸಂಘಟನೆಗಳು ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನಕ್ಕೆ ಒತ್ತಾಯಿಸುತ್ತಿದ್ದವು. ಹೆಚ್ಚುತ್ತಿರುವ ಸಾರ್ವಜನಿಕ ಒತ್ತಡದ ನಡುವೆ ಕೇಂದ್ರ ಸರ್ಕಾರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ವರದಿಯಾಗಿದೆ
ಧರ್ಮೇಂದ್ರ ಪ್ರಧಾನ್ ತಮ್ಮ ಪತ್ರದಲ್ಲಿ, "ಇದು ನನ್ನ ವೈಯಕ್ತಿಕ ಹುದ್ದೆಯ ಪ್ರಶ್ನೆಯಲ್ಲ, ದೇಶದ ವಿದ್ಯಾರ್ಥಿಗಳ ಭವಿಷ್ಯವೇ ಮುಖ್ಯ" ಎಂದು ಉಲ್ಲೇಖಿಸಿದ್ದು, ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಮುಂದಿನ ಕೇಂದ್ರ ಶಿಕ್ಷಣ ಸಚಿವರ ನೇಮಕ ಹಾಗೂ ಶಿಕ್ಷಣ ಇಲಾಖೆಯ ಮುಂದಿನ ಕ್ರಮಗಳ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.
Post a Comment