⚡ಟ್ರೆಂಡಿಂಗ್

ಬೆಂಗಳೂರು: ‘ವಿದ್ಯಾರ್ಥಿಗಳ ಧ್ವನಿ’ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಚಾಲನೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಆಯೋಜಿಸಲಾದ ‘ವಿದ್ಯಾರ್ಥಿಗಳ ಧ್ವನಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳ ಸಮಸ್ಯೆಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ಯುವಜನರ ಭವಿಷ್ಯದ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ದೇಶದಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಮೇಲಿನ ಅನ್ಯಾಯಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನರು ನಡೆಸಿದ ನಿರಂತರ ಹೋರಾಟವು ಮಹತ್ವದ ತಿರುವು ಪಡೆದುಕೊಂಡಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಸಂಘಟಿತ ಹೋರಾಟದ ಪರಿಣಾಮವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿರುವುದು ವಿದ್ಯಾರ್ಥಿ ಸಮುದಾಯದ ಧ್ವನಿಗೆ ದೊರೆತ ಮೊದಲ ಜಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳ ನ್ಯಾಯಯುತ ಹೋರಾಟದೊಂದಿಗೆ ಕಾಂಗ್ರೆಸ್ ಪಕ್ಷ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸದಾ ದೃಢವಾಗಿ ನಿಲ್ಲಲಿದ್ದು, ಶಿಕ್ಷಣ, ಉದ್ಯೋಗ ಮತ್ತು ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸುವ ಹೋರಾಟ ಮುಂದುವರಿಯಲಿದೆ ಎಂದು ಅವರು ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಯುವಕರು ಹಾಗೂ ಕಾಂಗ್ರೆಸ್ ಮುಖಂಡರು ಭಾಗವಹಿಸಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...