⚡ಟ್ರೆಂಡಿಂಗ್

ಸುಪ್ರೀಂ ಕೋರ್ಟ್‌ನಲ್ಲಿ ಹೈಡ್ರಾಮಾ: ಮುಖ್ಯ ನ್ಯಾಯಮೂರ್ತಿಗೆ ನಿಂದಿಸಿ ಪೇಪರ್ ಎಸೆದ ಅರ್ಜಿದಾರ; ಕ್ಷಮಿಸಿದ ನ್ಯಾಯಾಲಯ


ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅಪರೂಪದ ಹೈಡ್ರಾಮಾ ನಡೆದಿದ್ದು, ಅರ್ಜಿದಾರರೊಬ್ಬರು ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ನ್ಯಾಯಾಲಯದ ಕೊಠಡಿಯಲ್ಲೇ ದಾಖಲೆ ಪತ್ರಗಳನ್ನು ಗಾಳಿಯಲ್ಲಿ ಎಸೆದು ಗದ್ದಲ ಸೃಷ್ಟಿಸಿದ ಘಟನೆ ನಡೆದಿದೆ.

ಘಟನೆ ನಡೆಯುತ್ತಿದ್ದಂತೆಯೇ ನ್ಯಾಯಾಲಯದ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಅರ್ಜಿದಾರನನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕರೆದೊಯ್ದರು. ಕೆಲಕಾಲ ಕಲಾಪದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾದರೂ, ನಂತರ ನ್ಯಾಯಾಲಯದ ಕಾರ್ಯಚಟುವಟಿಕೆಗಳು ಎಂದಿನಂತೆ ಮುಂದುವರಿದವು.
ಈ ಘಟನೆ ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆಗೆ ನ್ಯಾಯಮೂರ್ತಿಗಳಾದ ಕೆ.ವಿ. ವಿಶ್ವನಾಥನ್ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠದ ಮುಂದೆ ನಡೆದಿದೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ನ್ಯಾಯಾಲಯವು ಅರ್ಜಿದಾರನ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರೂ, ಆತ ತನ್ನ ವರ್ತನೆಗೆ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಮಾನವೀಯ ದೃಷ್ಟಿಯಿಂದ ಕ್ಷಮಿಸಿ, ಮುಂದಿನ ದಿನಗಳಲ್ಲಿ ಇಂತಹ ವರ್ತನೆ ಮರುಕಳಿಸದಂತೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.
ನ್ಯಾಯಾಲಯದ ಘನತೆ ಮತ್ತು ಶಿಸ್ತು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ನ್ಯಾಯಾಂಗದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವಂತಹ ವರ್ತನೆ ಸಹಿಸುವುದಿಲ್ಲ ಎಂಬ ಸಂದೇಶವನ್ನು ಈ ಘಟನೆ ಮತ್ತೊಮ್ಮೆ ಸಾರಿದೆ.

— ನ್ಯೂ ವಿಜಯ ನ್ಯೂಸ್

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...