⚡ಟ್ರೆಂಡಿಂಗ್

ಬೆಳಗಾವಿಯಲ್ಲಿ ಮೂವರು ಮಕ್ಕಳಿಗೆ ಜನ್ಮ ನೀಡಿದ ತಾಯಿ: 20ರ ಹರೆಯದಲ್ಲೇ ತ್ರಿವಳಿ ಮಕ್ಕಳ ತಾಯಿಯಾದ ರೇಣುಕಾ


ಗೋಕಾಕ: ಬೆಳಗಾವಿ ಜಿಲ್ಲೆಯ ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಅಪರೂಪದ ಹೆರಿಗೆಯೊಂದು ಯಶಸ್ವಿಯಾಗಿ ನಡೆದಿದ್ದು, 20ರ ಹರೆಯದ ಮಹಿಳೆಯೊಬ್ಬರು ಒಂದೇ ಬಾರಿಗೆ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಒಂದೇ ಬಾರಿಗೆ ಮೂರು ಮಕ್ಕಳು ಜನಿಸಿರುವ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಅಪರೂಪದ ಹೆರಿಗೆಯಾಗಿರುವ ಕಾರಣ ವೈದ್ಯಕೀಯ ಸಿಬ್ಬಂದಿ ತಾಯಿ ಮತ್ತು ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದ್ದಾರೆ.

ಡಾ. ಶ್ವೇತಾ ನಾಯಿಕ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಹೆರಿಗೆಯನ್ನು ಯಶಸ್ವಿಯಾಗಿ ನಡೆಸಿದೆ. ಹೆರಿಗೆಯ ಬಳಿಕ ತಾಯಿ ಹಾಗೂ ಮೂವರು ಶಿಶುಗಳ ಆರೋಗ್ಯ ಸ್ಥಿರವಾಗಿದ್ದು, ಅಗತ್ಯ ವೈದ್ಯಕೀಯ ಮೇಲ್ವಿಚಾರಣೆ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ತ್ರಿವಳಿ ಮಕ್ಕಳ ಆಗಮನದಿಂದ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ಯಶಸ್ವಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ವರದಿ: ನ್ಯೂ ವಿಜಯ ನ್ಯೂಸ್

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...