⚡ಟ್ರೆಂಡಿಂಗ್

ವಿನಯ್ ಕುಲಕರ್ಣಿ ಜಾಮೀನು ಪ್ರಕರಣಕ್ಕೆ ಹೊಸ ತಿರುವು: ಸುಪ್ರೀಂ ಕೋರ್ಟ್‌ಗೆ ಹೋಗುವುದಿಲ್ಲ ಎಂದ ಯೋಗೇಶ್ ಗೌಡ ಪತ್ನಿ, ಸಹೋದರರಿಂದ ಮೇಲ್ಮನವಿ ಸಿದ್ಧತೆ

ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿ, ಜೀವಾವಧಿ ಶಿಕ್ಷೆಯನ್ನೂ ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಈ ಬೆಳವಣಿಗೆಯ ಬಳಿಕ ಪ್ರತಿಕ್ರಿಯೆ ನೀಡಿರುವ ಯೋಗೇಶ್ ಗೌಡ ಅವರ ಪತ್ನಿ ಮಲ್ಲಮ್ಮ, "ನಾನು ಸುಪ್ರೀಂ ಕೋರ್ಟ್‌ಗೆ ಹೋಗುವುದಿಲ್ಲ. ಯಾರಿಂದಲೂ ಹಣ ಪಡೆದಿಲ್ಲ. ನನ್ನ ದುಡಿಮೆಯಿಂದಲೇ ಬದುಕುತ್ತಿದ್ದೇನೆ" ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ, ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಹೈಕೋರ್ಟ್ ನೀಡಿರುವ ಜಾಮೀನು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ಈ ಬೆಳವಣಿಗೆಗಳಿಂದ ಪ್ರಕರಣ ಮತ್ತೊಮ್ಮೆ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...