⚡ಟ್ರೆಂಡಿಂಗ್

ವಿದ್ಯಾನಗರ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆ: ಪಕ್ಷ ಸಂಘಟನೆ, ಮುಂಬರುವ ಚುನಾವಣೆ ಕುರಿತು ಮಹತ್ವದ ಚರ್ಚೆ

, ಆ. 2: ವಿದ್ಯಾನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಣಿ ಸಭೆ ಇಂದು ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು, ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಶ್ರೀ ನಿಖಿಲ್ ಶಂಕರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕು. ಶೀತಲ್ ಮಠಪತಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ನಾಗರಾಜ್ ಕೋಟಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಅರ್ಜುನ್ ಪಾಟೀಲ್, ಉಪಾಧ್ಯಕ್ಷರಾದ ಶ್ರೀ ಕಾಶಿಮ್ ಕೋಡಲಗಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸುಜಾವುದ್ದೀನ್ ವಾಚ್ಮೇಕರ್, ಸೆಂಟ್ರಲ್ ಅಧ್ಯಕ್ಷರಾದ ಶ್ರೀ ಶಾಮು ಖಾನ್, ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಶ್ರೀ ಲಿಂಗರಾಜ್ ನುಲ್ವಿ, ಶ್ರೀ ಸಿದ್ದಾರ್ಥ ಡಂಬಳ, ಶ್ರೀ ಚಂದ್ರಕಾಂತ್ ಕೊಡಗಲಿ, ಶ್ರೀ ಅಕ್ಷಯ್ ಪಾಟೀಲ್ ಸೇರಿದಂತೆ ಅನೇಕ ಯುವ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಭೆಯಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬೂತ್ ಮಟ್ಟದಿಂದ ಮತ್ತಷ್ಟು ಸದೃಢಗೊಳಿಸುವುದು, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವ ಸಂಕಲ್ಪ ವ್ಯಕ್ತಪಡಿಸಲಾಯಿತು.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...