ಧಾರವಾಡ: ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಗೋಪಾಲ ಜೋಶಿ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದೂರಿನಲ್ಲಿ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಹಾಗೂ ಆರ್ಥಿಕ ತೊಂದರೆ ಉಂಟುಮಾಡಿರುವ ಆರೋಪಗಳನ್ನು ಮಾಡಲಾಗಿದೆ.
ಕಲ್ಯಾಣನಗರ ನಿವಾಸಿ ರಾಮಾ ಕುಲಕರ್ಣಿ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗೋಪಾಲ ಜೋಶಿ ಅವರಿಂದ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ತೀವ್ರ ಆರ್ಥಿಕ ಮತ್ತು ಮಾನಸಿಕ ತೊಂದರೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಅಪಾರ್ಟ್‌ಮೆಂಟ್‌ನಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ದೂರು ದಾಖಲಾದ ಬೆನ್ನಲ್ಲೇ ಗೋಪಾಲ ಜೋಶಿ ಅವರು ಕೆಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ. ಹಣ ನೀಡದಿದ್ದರೆ ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವುದಾಗಿ ರಾಮಾ ಕುಲಕರ್ಣಿ ಅವರು ಬೆದರಿಕೆ ಹಾಕಿದ್ದಾರೆ ಎಂದು ಜೋಶಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಹೀಗಾಗಿ ಎರಡೂ ಕಡೆಯಿಂದ ದೂರುಗಳು ದಾಖಲಾಗಿದ್ದು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ. ದೂರುಗಳಲ್ಲಿ ಮಾಡಲಾಗಿರುವ ಆರೋಪಗಳ ಕುರಿತು ಪೊಲೀಸರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಸೂಚನೆ: ಈ ವರದಿಯಲ್ಲಿ ಉಲ್ಲೇಖಿಸಿರುವ ಲೈಂಗಿಕ ದೌರ್ಜನ್ಯ, ಕಿರುಕುಳ, ಬೆದರಿಕೆ ಸೇರಿದಂತೆ ಎಲ್ಲ ಆರೋಪಗಳು ದೂರುಗಳಲ್ಲಿ ಮಾಡಲಾಗಿರುವ ಆರೋಪಗಳಷ್ಟೇ. ಆರೋಪಗಳು ಸಾಬೀತಾಗಿಲ್ಲ. ಪೊಲೀಸ್ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ನಂತರವೇ ಪ್ರಕರಣದ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ.
إرسال تعليق