ಹುಬ್ಬಳ್ಳಿ: ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ₹5,500 ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನಾ ಸ್ಥಳದಲ್ಲಿ ಜಮಾವಣೆಗೊಂಡಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಬ್ಬಿಗೆ ₹5,500 ದರ ನಿಗದಿಯಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರೊಂದಿಗೆ ಮಾತುಕತೆ ನಡೆಸುವವರೆಗೂ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ರೈತರ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದ್ದು, ಎರಡರಿಂದ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಜಮಾವಣೆಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಕಬ್ಬಿನ ದರ ನಿಗದಿ ವಿಚಾರದಲ್ಲಿ ಸರ್ಕಾರ ಮತ್ತು ರೈತರ ನಡುವಿನ ಮಾತುಕತೆ ಯಾವ ರೀತಿಯ ತಿರುವು ಪಡೆಯಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
Post a Comment