⚡ಟ್ರೆಂಡಿಂಗ್

ಕಾಂಗ್ರೆಸ್ ಸಂಘಟನೆಗೆ ಹೊಸ ಸಾರಥ್ಯ: ಸದಾನಂದ ಡಂಗನವರ, ಚಂದ್ರಶೇಖರ ಜುಟ್ಟಲ್ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀ ಸದಾನಂದ ವಿ. ಡಂಗನವರ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಚಂದ್ರಶೇಖರ ಜುಟ್ಟಲ್ ಅವರು ಅಧಿಕಾರ ಸ್ವೀಕರಿಸಿದರು.

ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ನೂತನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ಅಲ್ತಾಫಹುಸೇನ ಹಳ್ಳೂರ ಹಾಗೂ ಶ್ರೀ ಅನಿಲಕುಮಾರ ಪಾಟೀಲ ಅವರಿಂದ ನೂತನ ಅಧ್ಯಕ್ಷರು ಜವಾಬ್ದಾರಿ ವಹಿಸಿಕೊಂಡರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಸಂಸದರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಪಾಲಿಕೆ ಸದಸ್ಯರು ಸೇರಿದಂತೆ ಪಕ್ಷದ ಹಿರಿಯ-ಕಿರಿಯ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷರು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಜನಪರ ಆಶಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಹೊಸ ಜವಾಬ್ದಾರಿ, ಹೊಸ ಸಂಕಲ್ಪದೊಂದಿಗೆ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿರೀಕ್ಷೆ ಮೂಡಿದ್ದು, ನೂತನ ಅಧ್ಯಕ್ಷರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಹಾರೈಸಿದರು.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...