⚡ಟ್ರೆಂಡಿಂಗ್

ಹುಬ್ಬಳ್ಳಿಯಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಲೋಕಾಯುಕ್ತ ದಾಳಿ!

ಹುಬ್ಬಳ್ಳಿಯಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಲೋಕಾಯುಕ್ತ ದಾಳಿ!

ಹೆಸ್ಕಾಂ ಎಇಇ ದಂಪತಿಗೆ ಸೇರಿದ ಮನೆ, ಕಚೇರಿಗಳಲ್ಲಿ ಶೋಧ; ಚಿನ್ನದ ತೂಕ, ಮೌಲ್ಯಮಾಪನಕ್ಕೆ ಗೋಲ್ಡ್ ಸ್ಮಿತ್ ಕರೆ

ಹುಬ್ಬಳ್ಳಿ: ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದೆ.

ಹೆಸ್ಕಾಂನಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಕಿರಣಕುಮಾರ ಬೈಂದೂರ ಹಾಗೂ ಅವರ ಪತ್ನಿ ಪ್ರೀತಿ ಅವರಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ದಾಳಿ ವೇಳೆ ವಿವಿಧ ಸ್ಥಳಗಳಲ್ಲಿ ನಗದು, ಚಿನ್ನ, ಬೆಳ್ಳಿ ಹಾಗೂ ಹಲವು ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ. ಅಕ್ಷಯ ಕಾಲೋನಿಯಲ್ಲಿರುವ ಮನೆಯಲ್ಲಿ ಹೆಚ್ಚಿನ ಪ್ರಮಾಣದ ಚಿನ್ನ ಪತ್ತೆಯಾದ ಹಿನ್ನೆಲೆಯಲ್ಲಿ, ಚಿನ್ನದ ತೂಕ ಹಾಗೂ ಮೌಲ್ಯಮಾಪನ ಮಾಡಲು ಲೋಕಾಯುಕ್ತ ಅಧಿಕಾರಿಗಳು ಗೋಲ್ಡ್ ಸ್ಮಿತ್‌ರನ್ನು ಸ್ಥಳಕ್ಕೆ ಕರೆಸಿದ್ದಾರೆ ಎನ್ನಲಾಗಿದೆ.

ಸದ್ಯ ನಾಲ್ಕೂ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದೆ. ದಾಳಿಯಲ್ಲಿ ಎಷ್ಟು ಪ್ರಮಾಣದ ನಗದು, ಚಿನ್ನಾಭರಣ, ಬೆಳ್ಳಿ ಹಾಗೂ ಆಸ್ತಿ ದಾಖಲೆಗಳು ಪತ್ತೆಯಾಗಿವೆ ಎಂಬುದು ಲೋಕಾಯುಕ್ತ ಅಧಿಕಾರಿಗಳ ಅಧಿಕೃತ ಮಾಹಿತಿ ಬಳಿಕವಷ್ಟೇ ಸ್ಪಷ್ಟವಾಗಲಿದೆ.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...